ಮತ್ತಾಯ 2:23 - ಪರಿಶುದ್ದ ಬೈಬಲ್23 ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅನಿ ಥೈ ನಜರೆತ್ ಮನ್ತಲ್ಯಾ ಗಾಂವಾತ್ ರ್‍ಹಾಲೊ. ಅಶೆ “ತೆಕಾ ನಜರೆತ್‍ಕಾರ್ ಮನುನ್ ಬಲ್ವುತ್ಯಾತ್” ಮನುನ್ ಪ್ರವಾದ್ಯಾನಿ ಜೆಜುಚ್ಯಾ ವಿಶಯಾತ್ ಸಾಂಗಟಲ್ಲೆ ಖರೆ ಹೊಲೆ. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು