Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:3 - ಪರಿಶುದ್ದ ಬೈಬಲ್‌

3 ಯೆಹೂದ್ಯರ ಈ ಹೊಸ ರಾಜನ ವಿಷಯ ತಿಳಿದಾಗ ಹೆರೋದನು ಮತ್ತು ಜೆರುಸಲೇಮಿನ ಜನರೆಲ್ಲರೂ ಗಲಿಬಿಲಿಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದನ್ನು ಕೇಳಿ ಅರಸನಾದ ಹೆರೋದನೂ ಅವನ ಕೂಡ ಯೆರೂಸಲೇವಿುನವರೆಲ್ಲರೂ ಕಳವಳಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹೆ ಆಯ್ಕುನ್ ಹೆರೊದ್ ರಾಜಾ ಲೈ ಬೆಜಾರ್ ಹೊಲೊ ಅನಿ ಜೆರುಜಲೆಮಾತ್ ಸಗ್ಳೆ ಜಾನಾ ಭಿಯಾನ್ ಭರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:3
14 ತಿಳಿವುಗಳ ಹೋಲಿಕೆ  

“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಈ ಇಬ್ಬರು ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಿರುವುದನ್ನು ಕಂಡು ಅವರು ಸಿಟ್ಟುಗೊಂಡರು. ಯೇಸುವಿನ ಶಕ್ತಿಯ ಮೂಲಕವಾಗಿ ಜನರು ಪುನರುತ್ಥಾನ ಹೊಂದುತ್ತಾರೆ ಎಂದು ಪೇತ್ರ ಮತ್ತು ಯೋಹಾನ ಬೋಧಿಸುತ್ತಿದ್ದರು.


ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.


ಕೂಡಲೇ, ಹೆರೋದನು ಎಲ್ಲಾ ಮಹಾಯಾಜಕರನ್ನೂ ಧರ್ಮೋಪದೇಶಕರನ್ನೂ ಸಭೆ ಸೇರಿಸಿ, “ಕ್ರಿಸ್ತನು ಹುಟ್ಟಬೇಕಾಗಿದ್ದ ಸ್ಥಳ ಯಾವುದು?” ಎಂದು ಕೇಳಿದನು.


ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.


ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ಧವನ್ನೂ ಬಹುದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಬಗ್ಗೆ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಭಯಪಡಬೇಡಿ. ಅಂತ್ಯಕಾಲ ಬರುವುದಕ್ಕಿಂತ ಮುಂಚೆ ಈ ಸಂಗತಿಗಳು ನಡೆಯಲೇಬೇಕು.


ಅರಾಮ್ಯರ ರಾಜನು ಇದರಿಂದ ಬಹಳ ತಳಮಳಗೊಂಡನು. ಅರಾಮ್ಯರ ರಾಜನು ತನ್ನ ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಇಸ್ರೇಲಿನ ರಾಜನಿಗಾಗಿ ಗೂಢಚರ್ಯ ನಡೆಸುತ್ತಿರುವವರು ಯಾರೆಂಬುದನ್ನು ಹೇಳಿ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು