Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:5 - ಪರಿಶುದ್ದ ಬೈಬಲ್‌

5 ಅವರು, “ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟುವನು. ಏಕೆಂದರೆ ಪ್ರವಾದಿಯು ಪವಿತ್ರ ಗ್ರಂಥದಲ್ಲಿ ಹೀಗೆಂದು ಬರೆದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಅವರು, “ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಅವನಿಗೆ - ಯೂದಾಯದ ಬೇತ್ಲೆಹೇವಿುನಲ್ಲಿಯೇ; ಯಾಕಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕೆ ಅವರು, “ಯೂದಾಯ ಪ್ರಾಂತದ ಬೇತ್ಲೆಹೇಮಿನಲ್ಲಿಯೇ,” ಏಕೆಂದರೆ, ಪ್ರವಾದಿಯು ಬರೆದಿರುವದು ಈ ರೀತಿಯಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ತೆನಿ “ಜುದೆಯಾಚ್ಯಾ ಬೆತ್ಲೆಹೆಮ್ ಮನ್ತಲ್ಯಾ ಗಾಂವಾತ್” ಮಟ್ಲ್ಯಾನಿ. ಕಶ್ಯಾಕ್ ಮಟ್ಲ್ಯಾರ್ ಹೆಚ್ಯಾ ವಿಶಯಾತ್ ಪ್ರವಾದ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:5
11 ತಿಳಿವುಗಳ ಹೋಲಿಕೆ  

ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.


ನ್ಯಾಯಾಧೀಶರು ಆಳುತ್ತಿದ್ದಾಗ ದೇಶದಲ್ಲಿ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೆತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.


ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು!


ಅವರಿಬ್ಬರೂ ಪ್ರಯಾಣ ಮಾಡಿ ಬೆತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೆತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು.


ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲ್ಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಈ ಸೀಮೆಯಲ್ಲಿ ಸೇರಿವೆ.


ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.


ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


ಕೂಡಲೇ, ಹೆರೋದನು ಎಲ್ಲಾ ಮಹಾಯಾಜಕರನ್ನೂ ಧರ್ಮೋಪದೇಶಕರನ್ನೂ ಸಭೆ ಸೇರಿಸಿ, “ಕ್ರಿಸ್ತನು ಹುಟ್ಟಬೇಕಾಗಿದ್ದ ಸ್ಥಳ ಯಾವುದು?” ಎಂದು ಕೇಳಿದನು.


ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೆತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು