Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:9 - ಪರಿಶುದ್ದ ಬೈಬಲ್‌

9 ಆ ಜ್ಞಾನಿಗಳು ಅರಸನ ಮಾತನ್ನು ಕೇಳಿ ಅಲ್ಲಿಂದ ಹೊರಟಾಗ, ಪೂರ್ವ ದಿಕ್ಕಿನಲ್ಲಿ ಉದಯಿಸಿದ ನಕ್ಷತ್ರವನ್ನು ಮತ್ತೆ ಕಂಡರು. ಅವರು ಆ ನಕ್ಷತ್ರವನ್ನೇ ಹಿಂಬಾಲಿಸಿದರು. ಆ ನಕ್ಷತ್ರ ಅವರ ಮುಂದೆ ಚಲಿಸುತ್ತಾ ಹೋಗಿ ಮಗುವಿದ್ದ ಸ್ಥಳದ ಮೇಲೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಮೂಡಣದೇಶದಲ್ಲಿ ಕಂಡ ನಕ್ಷತ್ರವು ಅವರ ಮುಂದೆ ಮುಂದೆ ನಡೆದು ಕೂಸು ಇದ್ದ ಸ್ಥಳದ ಮೇಲೆ ಬಂದು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ರಾಜಾನ್ ಸಾಂಗಲ್ಲೆ ಆಯ್ಕುನ್ ತೆನಿ ಭಾಯ್ರ್ ಯೆಲೆ, ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ ದಿಸಲ್ಲಿ ತಿ ಚಿಕ್ಕಿ ತೆಂಕಾ ದಿಸ್ಲಿ, ತಿ ಚಿಕ್ಕಿ ತೆಂಚ್ಯಾ ಫಿಡೆ-ಫಿಡೆ ಜಾವ್ಕ್ ಲಾಗಲ್ಲಿ, ಅನಿ ತೊ ಪೊರ್ ಹೊತ್ತ್ಯಾ ಜಾಗ್ಯಾಕ್ ಜಾವ್ನ್ ಇಬೆ ರ್‍ಹಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:9
7 ತಿಳಿವುಗಳ ಹೋಲಿಕೆ  

ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.


ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


ನನ್ನನ್ನು ಪ್ರೀತಿಸುವವರನ್ನು ನಾನೂ ಪ್ರೀತಿಸುವೆನು; ಬಹಳವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು.


ಹೆರೋದನು ಆ ಜ್ಞಾನಿಗಳಿಗೆ, “ನೀವು ಹೋಗಿ ಚೆನ್ನಾಗಿ ವಿಚಾರಣೆ ಮಾಡಿ ಆ ಮಗು ಎಲ್ಲಿದೆ ಎಂಬುದನ್ನು ತಿಳಿದುಕೊಂಡು ನಂತರ ಬಂದು ನನಗೆ ತಿಳಿಸಿರಿ. ಆಗ ನಾನೂ ಹೋಗಿ ಆತನನ್ನು ಆರಾಧಿಸುವೆನು” ಎಂದು ಹೇಳಿ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಟ್ಟನು.


ಅವರು ಆ ನಕ್ಷತ್ರವನ್ನು ನೋಡಿ ಅತ್ಯಂತ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು