“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.
ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.
ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?
ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.
“ನಿಮ್ಮಲ್ಲಿರುವ ಮೃದುವಾದ ಮತ್ತು ಕನಿಕರವುಳ್ಳ ಮನುಷ್ಯನೂ ಬೇರೆಯವರಿಗೆ ಕ್ರೂರಿಯಾಗುವನು; ತನ್ನನ್ನು ಬಹಳವಾಗಿ ಪ್ರೀತಿಸುವ ಹೆಂಡತಿಗೂ ಅವನು ಕ್ರೂರಿಯಾಗುವನು; ಇನ್ನೂ ಜೀವಂತವಾಗಿರುವ ತನ್ನ ಮಕ್ಕಳಿಗೂ ಅವನು ಕ್ರೂರಿಯಾಗುವನು.
ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು.