ಮತ್ತಾಯ 20:18 - ಪರಿಶುದ್ದ ಬೈಬಲ್18 “ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೆ ಮತ್ತು ಧರ್ಮೋಪದೇಶಕರಿಗೆ ಒಪ್ಪಿಸಿಕೊಡಲಾಗುವುದು. ಅವರು ಆತನನ್ನು ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 “ಆಯ್ಕಾ! ಅತ್ತಾ ಅಮಿ ಜೆರುಜಲೆಮಾ ಪತರ್ ಜಾವ್ಕ್ ಲಾಗ್ಲಾಂವ್. ಥೈ ಮಾನ್ಸಾಚ್ಯಾ ಲೆಕಾಕ್ ಧರುನ್ ಮುಖ್ಯ ಯಾಜಕಾಂಚ್ಯಾ ಮುಖಂಡಾಂಚ್ಯಾ ಅನಿ ಶಾಸ್ತರಾ ಶಿಕ್ವುತಲ್ಯಾಂಚ್ಯಾ ಹಾತಾತ್ ದಿತ್ಯಾತ್. ತೆನಿ ತೆಕಾ ಮರ್‍ನಾಚಿ ಶಿಕ್ಷಾ ದಿತ್ಯಾತ್. ಅಧ್ಯಾಯವನ್ನು ನೋಡಿ |