ಮತ್ತಾಯ 20:19 - ಪರಿಶುದ್ದ ಬೈಬಲ್19 ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅಪಹಾಸ್ಯ ಮಾಡುವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಅನ್ಯರ ಕೈಗೆ ಒಪ್ಪಿಸುವರು; ಅವನು ಸತ್ತ ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ಮಾನಾ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಾತ್ ದಿತ್ಯಾತ್. ತೆನಿ ತೆಕಾ ಎಡ್ಸಡ್ತಾತ್, ಬಾರ್‍ಕೊಲಾನಿ ಮಾರ್‍ತ್ಯಾತ್ ಅನಿ ಕುರ್ಸಾರ್ ಮಾರ್‍ತ್ಯಾತ್. ಖರೆ ತಿನ್ ದಿಸಾಂಚ್ಯಾ ಮಾನಾ ತೊ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”