Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:20 - ಪರಿಶುದ್ದ ಬೈಬಲ್‌

20 ಆಗ ಜೆಬೆದಾಯನ ಹೆಂಡತಿಯು ಯೇಸುವಿನ ಬಳಿಗೆ ಬಂದಳು. ಅವಳ ಗಂಡುಮಕ್ಕಳು ಅವಳೊಂದಿಗಿದ್ದರು. ಅವಳು ಯೇಸುವಿನ ಮುಂದೆ ಅಡ್ಡಬಿದ್ದು ತನ್ನ ಕೋರಿಕೆಯನ್ನು ಈಡೇರಿಸಬೇಕೆಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಜೆಬೆದಾಯನ ಮಕ್ಕಳ ತಾಯಿ ಆತನಿಂದ ಏನೋ ಒಂದು ಬೇಡಿಕೊಳ್ಳಬೇಕೆಂದು ತನ್ನ ಮಕ್ಕಳನ್ನು ಕರಕೊಂಡು ಬಂದು ಆತನಿಗೆ ಅಡ್ಡಬಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದು, ಅವರ ಮುಂದೆ ಮೊಣಕಾಲೂರಿ ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಾನಾ ಜೆಬೆದೆವಾಚಿ ಬಾಯ್ಕೊ ಅಪ್ನಾಚ್ಯಾ ದೊನ್ ಲೆಕಾಂಚ್ಯಾ ವಾಂಗ್ಡಾ ಜೆಜುಕ್ಡೆ ಯೆವ್ನ್ ತೆಚ್ಯಾ ಇದ್ರಾಕ್ ಮಾನ್ ಬಾಗ್ವುಲಿನ್ , ಅನಿ ಎಕ್ ಉಪ್ಕಾರ್ ಇಚಾರ್‍ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:20
10 ತಿಳಿವುಗಳ ಹೋಲಿಕೆ  

ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.


ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ನೋಡಿದನು. ಅವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿದ್ದರು. ಅವರು ಮೀನು ಹಿಡಿಯಲು ತಮ್ಮ ಬಲೆಗಳನ್ನು ಸರಿಪಡಿಸಿಕೊಳ್ಳುತ್ತಿದ್ದರು. ಯೇಸು ಇವರನ್ನು ಕರೆದನು.


ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೇಫನ ತಾಯಿಯಾದ ಮರಿಯಳು, ಹಾಗೂ ಯೋಹಾನ ಮತ್ತು ಯಾಕೋಬನ ತಾಯಿ ಅಲ್ಲಿದ್ದರು.


ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)


ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ಶಿಷ್ಯರು ಬೆಟ್ಟದ ಮೇಲೆ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು. ಆದರೆ ಕೆಲವು ಶಿಷ್ಯರು ಆತನೇ ನಿಜವಾದ ಯೇಸು ಎಂಬುದನ್ನು ನಂಬಲಿಲ್ಲ.


ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.


ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.


ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು