Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:25 - ಪರಿಶುದ್ದ ಬೈಬಲ್‌

25 ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು, “ಯೆಹೂದ್ಯರಲ್ಲದವರ ಅಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆಂದೂ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರವನ್ನು ನಡೆಸುತ್ತಾರೆಂದೂ ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆಚೆಸಾಟ್ನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಎಕಾಕ್ಡೆ ಬಲ್ವುಲ್ಯಾನ್. ಅನಿ “ಖಲ್ಯಾಬಿ ಜುದೆವ್ ನ್ಹಯ್ ಹೊತ್ತೆ ಅದಿಕಾರಿ ಅಪ್ನಾ ವರ್‍ತಿ ಎಕ್ ಅದಿಕಾರ್ ಹಾಯ್ ಅನಿ ತೆಂಚ್ಯಾ ಮುಖಂಡಾಕ್ನಿ ಸಗ್ಳೆ ಕರ್‍ತಲೊ ಅದಿಕಾರ್ ಹಾಯ್ ಮನುನ್ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:25
14 ತಿಳಿವುಗಳ ಹೋಲಿಕೆ  

ಯೇಸು ಎಲ್ಲಾ ಶಿಷ್ಯರನ್ನು ಒಟ್ಟಾಗಿ ಕರೆದು, “ಯೆಹೂದ್ಯರಲ್ಲದವರು ಅಧಿಪತಿಗಳನ್ನು ಹೊಂದಿದ್ದಾರೆ. ಆ ಅಧಿಪತಿಗಳು ಜನರ ಮೇಲೆ ತಮಗಿರುವ ಅಧಿಕಾರವನ್ನು ತೋರಿಸಲು ಇಷ್ಟಪಡುತ್ತಾರೆಂಬುದು ನಿಮಗೆ ತಿಳಿದಿದೆ. ಅವರ ಪ್ರಮುಖ ನಾಯಕರುಗಳು ಜನರ ಮೇಲೆ ತಮಗಿರುವ ಅಧಿಕಾರವನ್ನೆಲ್ಲಾ ಉಪಯೋಗಿಸಲು ಇಷ್ಟಪಡುತ್ತಾರೆ.


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು.


ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು