ಮತ್ತಾಯ 20:31 - ಪರಿಶುದ್ದ ಬೈಬಲ್31 ಜನರೆಲ್ಲರೂ ಕುರುಡರನ್ನು ಗದರಿಸಿ, ಸುಮ್ಮನಿರಬೇಕೆಂದು ಹೇಳಿದರು. ಆದರೆ ಆ ಕುರುಡರು, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಹೆಚ್ಚುಹೆಚ್ಚು ಕೂಗಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಸುಮ್ಮನಿರಬೇಕೆಂದು ಜನರು ಅವರನ್ನು ಗದರಿಸಿದರು. ಅವರಾದರೋ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ಗುಂಪಿನವರು - ಸುಮ್ಮನಿರಿ ಎಂದು ಅವರನ್ನು ಗದರಿಸಲು ಅವರು - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವರು ಸುಮ್ಮನಿರುವಂತೆ ಜನರ ಸಮೂಹವು ಅವರನ್ನು ಗದರಿಸಿತು. ಆದರೂ ಅವರು, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಲೊಕಾನಿ ತೆಂಕಾ ಜೊರ್ ಕರುನ್ “ಗಪ್ ರ್‍ಹಾವಾ.” ಮಟ್ಲ್ಯಾನಿ. ಖರೆ ತೆನಿ ಅನಿ ಉಲ್ಲೆ ಜೊರಾನಿ, “ಧನಿಯಾ, ದಾವಿದಾಚ್ಯಾ ಲೆಕಾ ಅಮ್ಚೆ ವರ್‍ತಿ ದಯಾ ದಾಕ್ವು!” ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |