Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:11 - ಪರಿಶುದ್ದ ಬೈಬಲ್‌

11 ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತ್ಯಾ ತಾಂಡ್ಯಾತ್ಲ್ಯಾ ಲೊಕಾನಿ,“ಹ್ಯೊ ಗಾಲಿಲಿಯಾಚ್ಯಾ ನಜರೆತಾತ್ಲೊ ಜೆಜು ಎಕ್ ಪ್ರವಾದಿ.” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:11
20 ತಿಳಿವುಗಳ ಹೋಲಿಕೆ  

ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.


ಈ ಸಂಗತಿಗಳನ್ನು ಕೇಳಿದ ಜನರಲ್ಲಿ ಕೆಲವರು, “ಈ ಮನುಷ್ಯನು ನಿಜವಾಗಿಯೂ ಪ್ರವಾದಿ” ಎಂದರು.


ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.


“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.


ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.


ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.


ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ.


ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?” ಎಂದು ಕೇಳಿದರು. ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು. ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು. ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು.


ಇನ್ನು ಕೆಲವರು, “ಇವನು ಎಲೀಯ”ನೆಂದು ಹೇಳಿದರು. ಇತರ ಜನರು, “ಯೇಸು ಒಬ್ಬ ಪ್ರವಾದಿ. ಬಹುಕಾಲದ ಹಿಂದೆ ಜೀವಿಸಿದ್ದ ಪ್ರವಾದಿಗಳಂತೆ ಇವನೂ ಒಬ್ಬನು” ಎಂದು ಹೇಳಿದರು.


ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.


ಅವರು ಅವನಿಗೆ, “ನೀನು ನಿನ್ನ ಬಗ್ಗೆ, ‘ನಾನು ಕ್ರಿಸ್ತನೂ ಅಲ್ಲ, ಎಲೀಯನೂ ಅಲ್ಲ, ಪ್ರವಾದಿಯೂ ಅಲ್ಲ’ ಎಂದು ಹೇಳುತ್ತಿರುವೆ. ಹಾಗಾದರೆ ನೀನು ಜನರಿಗೆ ಏಕೆ ದೀಕ್ಷಾಸ್ನಾನ ಮಾಡಿಸುವೆ?” ಎಂದು ಕೇಳಿದರು.


ಅನಂತರ ನಾನು ಜೆರುಸಲೇಮಿಗೆ ಹೋಗಬೇಕು. ಏಕೆಂದರೆ ಪ್ರವಾದಿಗಳು ಅಲ್ಲೇ ಕೊಲ್ಲಲ್ಪಡತಕ್ಕದ್ದು.


ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.


ಬಳಿಕ ಯೇಸು ಜೆರುಸಲೇಮಿನೊಳಗೆ ಹೋದನು. ಪಟ್ಟಣದಲ್ಲಿದ್ದ ಜನರೆಲ್ಲ ಗಲಿಬಿಲಿಗೊಂಡರು. ಅವರು, “ಈ ಮನುಷ್ಯನು ಯಾರು?” ಎಂದು ಕೇಳಿದರು.


‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.


ಅವರು ಯೇಸುವನ್ನು ಬಂಧಿಸಲು ಉಪಾಯ ಹುಡುಕಿದರೂ ಜನರಿಗೆ ಭಯಪಟ್ಟು ಬಂಧಿಸಲಿಲ್ಲ. ಏಕೆಂದರೆ ಯೇಸು ಒಬ್ಬ ಪ್ರವಾದಿ ಎಂದು ಜನರು ನಂಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು