ಮತ್ತಾಯ 21:19 - ಪರಿಶುದ್ದ ಬೈಬಲ್19 ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತನ್ನಾ ರಸ್ತ್ಯಾಚ್ಯಾ ಬಾಜುಕ್ ಹೊತ್ತೆ ಅಂಜುರಾಚೆ ಝಾಡ್ ತೆನಿ ಬಗಟ್ಲ್ಯಾನ್. ಅನಿ ತೊ ತ್ಯಾ ಝಾಡಾಕ್ಡೆ ಹನ್ನಾ ಖಾವ್ಕ್ ಗೆಲೊ. ಖರೆ ತ್ಯಾ ಝಾಡಾಕ್ ಪಾನಾ ಸೊಡುನ್ ಎಕ್ ಸೈತ್ ಹನ್ನ್ ತೆಕಾ ಗಾವುಕ್ನಾ. ತೆಚೆಸಾಟ್ನಿ ತೆನಿ ತ್ಯಾ ಝಾಡಾಕ್,“ಅನಿ ಫಿಡೆ ತುಕಾ ಕನ್ನಾಬಿ ಫಳಾ ಹೊಯ್‍ನಸ್ತಾನಾ ರ್‍ಹಾಂವ್ದಿತ್.” ಮಟ್ಲ್ಯಾನ್. ತನ್ನಾ ತೆ ಅಂಜುರಾಚೆ ಝಾಡ್ ವಾಳುನ್ ಗೆಲೆ. ಅಧ್ಯಾಯವನ್ನು ನೋಡಿ |
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.