Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:2 - ಪರಿಶುದ್ದ ಬೈಬಲ್‌

2 ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮ ಎದುರಿನಲ್ಲಿ ಇರುವ ಪಟ್ಟಣದೊಳಕ್ಕೆ ಹೋಗಿ. ನೀವು ಅದನ್ನು ಪ್ರವೇಶಿಸಿದಾಗ, ಅಲ್ಲೇ ಕಟ್ಟಿರುವ ಒಂದು ಕತ್ತೆಯನ್ನು ಕಾಣುತ್ತೀರಿ. ಆ ಕತ್ತೆಯ ಜೊತೆಯಲ್ಲಿ ಒಂದು ಕತ್ತೆಮರಿಯನ್ನು ಸಹ ನೀವು ಕಾಣುವಿರಿ. ಆ ಎರಡು ಕತ್ತೆಗಳನ್ನು ಬಿಚ್ಚಿ ಅವುಗಳನ್ನು ನನ್ನ ಬಳಿಗೆ ತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಯೇಸು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗೆ ಇರುವ ಆ ಹಳ್ಳಿಗೆ ಹೋಗಿರಿ. ಅಲ್ಲಿ ಕಟ್ಟಿಹಾಕಿರುವ ಒಂದು ಹೇಸರಗತ್ತೆಯನ್ನೂ ಅದರ ಮರಿಯನ್ನೂ ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೇಸು ಇಬ್ಬರು ಶಿಷ್ಯರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರ ಕೂಡ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತರಕ್ಕೆ ಹಿಡುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರಿಗೆ, “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ತಕ್ಷಣವೇ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಿರುವುದನ್ನು ನೀವು ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತುಮ್ಕಾ ಫಿಡೆ ದಿಸ್ತಲ್ಯಾ ಗಾಂವಾತ್ ಜಾವಾ ಅನಿ ಗಾಂವಾತ್ ಭುತ್ತುರ್ ಗೆಲ್ಲ್ಯಾ ತನ್ನಾಚ್ ಪೆಟ್ಯಾಚ್ಯಾ ವಾಂಗ್ಡಾ ಭಾಂದಲ್ಲೆ ಎಕ್ ಗಾಡಾವ್ ತುಮ್ಕಾ ಗಾವ್ತಾ. ತೆಂಕಾ ಸೊಡಾ ಅನಿ ಮಾಜೆಕ್ಡೆ ಘೆವ್ನ್ ಯೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:2
8 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನೀವು ನಗರಕ್ಕೆ ಹೋಗಿ ನಾನು ಸೂಚಿಸುವ ವ್ಯಕ್ತಿಯನ್ನು ಭೇಟಿಮಾಡಿ ಅವನಿಗೆ, ‘ಆರಿಸಿಕೊಂಡ ಸಮಯ ಸಮೀಪಿಸಿತು. ನಾನು ಪಸ್ಕಹಬ್ಬದ ಊಟವನ್ನು ನಿನ್ನ ಮನೆಯಲ್ಲಿ ನನ್ನ ಶಿಷ್ಯರೊಂದಿಗೆ ಮಾಡುತ್ತೇನೆ ಎಂದು ಉಪದೇಶಕನು ಹೇಳುತ್ತಾನೆ’ ಎಂಬುದಾಗಿ ತಿಳಿಸಿರಿ” ಎಂದು ಉತ್ತರಕೊಟ್ಟನು.


ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.


ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನತ್ತ ಪ್ರಯಾಣ ಮಾಡುತ್ತಾ ಆಲಿವ್ ಗುಡ್ಡದ ಸಮೀಪದಲ್ಲಿದ್ದ ಬೆತ್ಛಗೆಯನ್ನು ಸಮೀಸಿದರು.


ನೀವು ಏಕೆ ಕತ್ತೆಗಳನ್ನು ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನಿಮ್ಮನ್ನು ಯಾರಾದರೂ ಕೇಳಿದರೆ, ‘ಈ ಕತ್ತೆಗಳು ಗುರುವಿಗೆ ಬೇಕಾಗಿವೆ. ಆತನು ಅವುಗಳನ್ನು ಬೇಗನೆ ಹಿಂದಕ್ಕೆ ಕಳುಹಿಸುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು