Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:27 - ಪರಿಶುದ್ದ ಬೈಬಲ್‌

27 ಬಳಿಕ ಅವರು, “ಯೋಹಾನನಿಗೆ ಎಲ್ಲಿಂದ ಅಧಿಕಾರ ಬಂದಿತೋ ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಆಗ ಯೇಸು, “ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆ ಎಂಬುದನ್ನು ನಾನು ಸಹ ನಿಮಗೆ ಹೇಳುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಳಿಕ ಬಂದು, “ನಮಗೆ ಗೊತ್ತಿಲ್ಲ,” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು, “ಹಾಗಾದರೆ, ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕಡೆಗೆ ಅವರು - ನಾವರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ - ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೆಚೆಸಾಟ್ನಿ ತೆನಿ ಜೆಜುಕ್, ಅಮ್ಕಾ ಗೊತ್ತ್ ನಾ ಮನುನ್ ಜಬಾಬ್ ದಿಲ್ಯಾನಿ, ತನ್ನಾ ಜೆಜುನ್ ತೆಂಕಾ,“ತಸೆ ಜಾಲ್ಯಾರ್ ಮಿಯಾಬಿ ಕಸ್ಲ್ಯಾ ಹಕ್ಕಾನಿ ಹೆ ಸಗ್ಳೆ ಕರುಕ್ ಲಾಗ್ಲಾ ಮನುನ್ ತುಮ್ಕಾ ಸಾಂಗಿನಾ”. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:27
19 ತಿಳಿವುಗಳ ಹೋಲಿಕೆ  

ನಾವು ಬೋಧಿಸುವ ಸುವಾರ್ತೆಯು ಮರೆಯಾಗಿರಬಹುದು. ಆದರೆ ನಾಶನದ ಮಾರ್ಗದಲ್ಲಿರುವವರಿಗೆ ಮಾತ್ರ ಅದು ಮರೆಯಾಗಿದೆ.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು.


ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಯೆಹೋವನು ಜನರಿಗೆ ಪಾಠ ಕಲಿಸಲು ಪ್ರಯತ್ನಿಸುತ್ತಿದ್ದಾನೆ. ತನ್ನ ಬೋಧನೆಯನ್ನು ತನ್ನ ಜನರು ಅರಿತುಕೊಳ್ಳಲೆಂದು ಯೆಹೋವನು ಪ್ರಯತ್ನಿಸುತ್ತಿದ್ದಾನೆ. ಆದರೆ ಜನರು ಇನ್ನೂ ತಾಯಿ ಹಾಲು ಕುಡಿಯುವ ಚಿಕ್ಕ ಕೂಸುಗಳಿಂತಿದ್ದಾರೆ.


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.


“ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು