ಮತ್ತಾಯ 21:31 - ಪರಿಶುದ್ದ ಬೈಬಲ್31 “ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 “ತರ್ ಹ್ಯಾ ದೊಗ್ಯಾನಿತ್ಲ್ಯಾ ಖಲ್ಯಾ ಲೆಕಾನ್ ಬಾಬಾಕ್ ಪಾಜೆ ಹೊಲ್ಲೆ ಕಾಮ್ ಕರ್‍ಲ್ಯಾನ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ,“ಪಯ್ಲೆಚ್ಯಾ ಲೆಕಾನ್.” ಮನುನ್ ಜಬಾಬ್ ದಿಲ್ಯಾನಿ. ತೆಚೆಸಾಟ್ನಿ ಜೆಜುನ್ ತೆಂಕಾ,“ಮಿಯಾ ತುಮ್ಕಾ ಸಾಂಗ್ತಾ, ತೆರ್‍ಗಿ ವಸುಲ್ ಕರ್‍ತಲೆ ಅನಿ ವೈಬಿಚಾರ್ ಕರ್‍ತಲಿ ಲೊಕಾ ತುಮ್ಚ್ಯೆನ್ಕಿ ಅದ್ದಿ ದೆವಾಚ್ಯಾ ರಾಜಾತ್ ಜಾವ್ನ್ ಪಾವ್ತ್ಯಾತ್. ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’