ಮತ್ತಾಯ 21:35 - ಪರಿಶುದ್ದ ಬೈಬಲ್35 “ಆದರೆ ರೈತರು ಆ ಸೇವಕರನ್ನು ಹಿಡಿದುಕೊಂಡು ಒಬ್ಬನನ್ನು ಹೊಡೆದರು; ಬೇರೊಬ್ಬನನ್ನು ಕತ್ತರಿಸಿಹಾಕಿದರು; ಮೂರನೇ ಸೇವಕನನ್ನು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಒಕ್ಕಲಿಗರು ಅವನ ಆಳುಗಳನ್ನು ಹಿಡುಕೊಂಡು ಒಬ್ಬನನ್ನು ಹೊಡೆದರು, ಒಬ್ಬನನ್ನು ಕಡಿದು ಹಾಕಿದರು, ಒಬ್ಬನನ್ನು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಗುತ್ಕೆ ಧರಲ್ಲ್ಯಾನಿ ತ್ಯಾ ಆಳಾಕ್ನಿ ಧರ್‍ಲ್ಯಾನಿ, ಅನಿ ಎಕ್ಲ್ಯಾಕ್ ಮಾರ್ ಘಾಟ್ಲ್ಯಾನಿ, ದುಸ್ರ್ಯಾಕ್ ಜಿವಾನಿಚ್ ಮಾರ್‍ಲ್ಯಾನಿ, ಅನಿ ಅನಿಎಕ್ಲ್ಯಾಕ್ ಗುಂಡ್ಯಾನಿ ಮಾರ್‍ಲ್ಯಾನಿ ಅಧ್ಯಾಯವನ್ನು ನೋಡಿ |
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)