Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:39 - ಪರಿಶುದ್ದ ಬೈಬಲ್‌

39 ಆದ್ದರಿಂದ ರೈತರು ಮಗನನ್ನು ಹಿಡಿದು ತೋಟದಿಂದ ಹೊರಕ್ಕೆಸೆದು ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡುಹೋಗಿ, ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವನನ್ನು ಹಿಡಿದು ದ್ರಾಕ್ಷೇತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ತೆನಿ ತೆಕಾ ಧರ್‍ಲ್ಯಾನಿ ಅನಿ ಶೆತಾತ್ನಾ ಭಾಯ್ರ್ ನ್ಹೆವ್ನ್ ಜಿವಾನಿ ಮಾರುನ್ ಟಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:39
16 ತಿಳಿವುಗಳ ಹೋಲಿಕೆ  

ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.


ಬಳಿಕ ಯೇಸುವನ್ನು ಬಂಧಿಸಿದ್ದವರು ಆತನನ್ನು ಪ್ರಧಾನ ಯಾಜಕನಾದ ಕಾಯಫನ ಮನೆಗೆ ಕರೆದೊಯ್ದರು. ಅಲ್ಲಿ ಧರ್ಮೋಪದೇಶಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಒಟ್ಟಿಗೆ ಸೇರಿದ್ದರು.


ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!


ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!


ಆಗ ಅನ್ನನು ಯೇಸುವನ್ನು ಮತ್ತೆ ಕಟ್ಟಿಸಿ, ಪ್ರಧಾನಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.


ಆಗ ಯೇಸು, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸ ಇದೆಯೋ?” ಎಂದನು. ಕೂಡಲೇ ಆ ಜನರು ಬಂದು ಯೇಸುವನ್ನು ಹಿಡಿದು, ಬಂಧಿಸಿದರು.


“ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


“ಹೀಗಿರಲು ತೋಟದ ಯಜಮಾನನು ತಾನೇ ಬಂದಾಗ ಈ ರೈತರಿಗೆ ಏನು ಮಾಡುತ್ತಾನೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು