Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:5 - ಪರಿಶುದ್ದ ಬೈಬಲ್‌

5 “ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಅಬಕ್, ತುಜೊ ರಾಜಾ ತುಜ್ಯಾ ಭುತ್ತುರ್ ಯೆವ್ಲಾ ತೊ ಖಾಯ್ಲ್ ಹೊವ್ನ್ ಚಲ್ತಲೊ, ಅನಿ ಗಾಡ್ವಾಚ್ಯಾ ಪೆಟ್ಯಾ ವರ್‍ತಿ ಬಸುನ್ ತೊ ಯೆತಾ. ಮನುನ್ ಸಿಯೊನ್ ಶಾರಾಕ್ ಸಾಂಗ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:5
39 ತಿಳಿವುಗಳ ಹೋಲಿಕೆ  

ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವುದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.’”


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”


ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ಯೆಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ.


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


‘ಯೆಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ, ಯೆಹೂದವನ್ನು ಆಳುವವರಲ್ಲಿ ನೀನು ಪ್ರಾಮುಖ್ಯವಾಗಿರುವೆ. ಹೌದು, ಅಧಿಪತಿಯೊಬ್ಬನು ನಿನ್ನೊಳಗಿಂದ ಬರುವನು. ನನ್ನ ಜನರಾದ ಇಸ್ರೇಲರನ್ನು ಆತನೇ ಮುನ್ನಡೆಸುವನು’” ಎಂದು ಉತ್ತರಕೊಟ್ಟರು.’”


ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.


ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.


ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


ರಾಜನಾದ ದಾವೀದನು ಚೀಬನಿಗೆ, “ಈ ವಸ್ತುಗಳೆಲ್ಲ ಏತಕ್ಕಾಗಿ?” ಎಂದು ಕೇಳಿದನು. ಚೀಬನು, “ಹೇಸರಕತ್ತೆಗಳನ್ನು ರಾಜನ ಕುಟುಂಬದವರು ಸವಾರಿ ಮಾಡುವುದಕ್ಕಾಗಿಯೂ ರೊಟ್ಟಿಗಳನ್ನು ಮತ್ತು ಹಣ್ಣುಗಳನ್ನು ಸೇವಕರು ತಿನ್ನುವುದಕ್ಕಾಗಿಯೂ ತಂದಿದ್ದೇನೆ. ಅರಣ್ಯದಲ್ಲಿ ಶಕ್ತಿಗುಂದಿಹೋದವನು ದ್ರಾಕ್ಷಾರಸವನ್ನು ಕುಡಿಯಲಿ” ಎಂದು ಉತ್ತರಿಸಿದನು.


ಅಬ್ದೋನನಿಗೆ ನಲವತ್ತು ಮಕ್ಕಳೂ ಮೂವತ್ತು ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಅಬ್ದೋನನು ಎಂಟು ವರ್ಷ ಇಸ್ರೇಲರಿಗೆ ನ್ಯಾಯಾಧೀಶನಾಗಿದ್ದನು.


“ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!


ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.


“ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಆ ಶಿಷ್ಯರು ಹೋಗಿ, ಯೇಸು ಹೇಳಿದ್ದಂತೆಯೇ ತಾಯಿ ಕತ್ತೆಯನ್ನೂ ಮತ್ತು ಅದರ ಮರಿಯನ್ನೂ ಯೇಸುವಿನ ಬಳಿಗೆ ತಂದರು.


ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು