ಮತ್ತಾಯ 22:24 - ಪರಿಶುದ್ದ ಬೈಬಲ್24 “ಬೋಧಕನೇ, ವಿವಾಹಿತನೊಬ್ಬನು ಮಕ್ಕಳನ್ನು ಪಡೆಯದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತೆನಿ ಜೆಜುಕ್,“ಗುರುಜಿ, ಮೊಯ್ಜೆನ್ ಎಕ್ ಮಾನುಸ್ ಪೊರಾ ನಸ್ತಾನಾ ಮರ್ಲ್ಯಾರ್ ತೆಚ್ಯಾ ಭಾವಾನ್ ತೆಚ್ಯಾ ಬಾಯ್ಕೊಕ್ಡೆ ಲಗಿನ್ ಕರುನ್ ಘೆವ್ಚೆ. ಅನಿ ತೆಂಕಾ ಜಲಮಲ್ಲಿ ಪೊರಾ ತ್ಯಾ ಮರಲ್ಲ್ಯಾ ಮಾನ್ಸಾಚಿ ಪೊರಾ ಮನುನ್ ಲೆಕ್ಕ್, ಮನುನ್ ಸಾಂಗ್ಲ್ಯಾನಾಯ್. ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೀಮೆಲೆಕನ ಭೂಮಿಯನ್ನು ನಿನಗೋಸ್ಕರ ಕೊಂಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.