ಮತ್ತಾಯ 22:32 - ಪರಿಶುದ್ದ ಬೈಬಲ್32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ನಿಮಗೆ ನುಡಿದದ್ದನ್ನು ನೀವು ಓದಲಿಲ್ಲವೇ. ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಮಿಯಾ ಅಬ್ರಾಹಾಮಾಚೊ ದೆವ್, ಇಸಾಕಾಚೊ ದೆವ್, ಅನಿ ಜಾಕೊಬಾಚೊ ದೆವ್. ಅಶೆ ಮಟ್ಲ್ಯಾರ್ ಝಿತ್ತ್ಯಾಂಚೊ ದೆವ್ ತೊ ಮರಲ್ಲ್ಯಾಂಚೊ ನ್ಹಯ್.” ಅಧ್ಯಾಯವನ್ನು ನೋಡಿ |
ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.