Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:39 - ಪರಿಶುದ್ದ ಬೈಬಲ್‌

39 ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಆ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಒಂದು ಉಂಟು, ಅದು ಯಾವದಂದರೆ - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ದೊನ್ವೆಚೊ ಲೈ ಗರ್ಜೆಚೊ ಉಪಾದೆಸ್ ಮಟ್ಲ್ಯಾರ್, ತುಜೊಚ್ ತಿಯಾ ಕಸೊ ಪ್ರೆಮ್ ಕರ್‍ತೆ ತಸೊ ತುಜ್ಯಾ ಸೆಜಾರ್‍ಯಾಚೊ ಪ್ರೆಮ್ ಕರ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:39
11 ತಿಳಿವುಗಳ ಹೋಲಿಕೆ  

‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.


ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!


“ನೀವು ನಿಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಿರಿ” ಎಂಬ ಒಂದೇ ಒಂದು ಆಜ್ಞೆಯಲ್ಲಿ ಇಡೀ ಧರ್ಮಶಾಸ್ತ್ರವೇ ಅಡಕವಾಗಿದೆ.


ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು ನಿನ್ನನ್ನು ನೀನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು” ಎಂದು ಉತ್ತರಕೊಟ್ಟನು.


ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.


ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.


ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ಇದೇ ಮೊದಲನೆಯ ಮತ್ತು ಅತ್ಯಂತ ಪ್ರಮುಖವಾದ ಆಜ್ಞೆ.


ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು