Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:40 - ಪರಿಶುದ್ದ ಬೈಬಲ್‌

40 ಇಡೀ ಧರ್ಮಶಾಸ್ತ್ರವು ಮತ್ತು ಪ್ರವಾದಿಗಳ ಎಲ್ಲಾ ಗ್ರಂಥಗಳು ಈ ಎರಡು ಆಜ್ಞೆಗಳ ಅರ್ಥವನ್ನೇ ಒಳಗೊಂಡಿವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಈ ಎರಡು ಆಜ್ಞೆಗಳು ಎಲ್ಲಾ ಧರ್ಮಶಾಸ್ತ್ರಕ್ಕೂ ಪ್ರವಾದನಗ್ರಂಥಕ್ಕೂ ಆಧಾರವಾಗಿವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಸಗ್ಳೆ ಮೊಯ್ಜೆಚೆ ಖಾಯ್ದೆ ಅನಿ ಪ್ರವಾದ್ಯಾಂಚೆ ಶಿಕಾಪ್ ಹ್ಯಾ ದೊನ್ ಖಾಯ್ದ್ಯಾಂಚ್ಯಾ ವರ್‍ತಿಚ್ ಠಿಕುನ್ ಹಾತ್.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:40
9 ತಿಳಿವುಗಳ ಹೋಲಿಕೆ  

ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.


“ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.


ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.


“ನೀವು ನಿಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಿರಿ” ಎಂಬ ಒಂದೇ ಒಂದು ಆಜ್ಞೆಯಲ್ಲಿ ಇಡೀ ಧರ್ಮಶಾಸ್ತ್ರವೇ ಅಡಕವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು