Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:43 - ಪರಿಶುದ್ದ ಬೈಬಲ್‌

43 ಆಗ ಯೇಸುವು ಫರಿಸಾಯರಿಗೆ, “ಹಾಗಾದರೆ ದಾವೀದನು ಆತನನ್ನು ‘ಪ್ರಭು’ ಎಂದು ಏಕೆ ಕರೆದನು? ದಾವೀದನು ಪರಿಶುದ್ಧಾತ್ಮನ ಶಕ್ತಿಯಿಂದ ಮಾತನಾಡಿದ್ದನು. ದಾವೀದನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆಗ ಯೇಸು, “ಹಾಗಾದರೆ, ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಆತನನ್ನು ‘ಪ್ರಭು’ ಎಂದು ಕರೆದಿದ್ದಾನಲ್ಲಾ. ಅದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43-44 ದಾವೀದನ ಮಗನು ಎಂದು ಹೇಳಲು ಆತನು - ಹಾಗಾದರೆ ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. ಎಂಬ ಮಾತಿನಲ್ಲಿ ದಾವೀದನು ಪವಿತ್ರಾತ್ಮಪ್ರೇರಿತನಾಗಿ ಆತನನ್ನು ಒಡೆಯನು ಅನ್ನುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತನ್ನಾ ಜೆಜುನ್, “ತಸೆಹೊಲ್ಯಾರ್ ಪವಿತ್ರ್ ಆತ್ಮ್ಯಾನ್ ದಾವಿದಾಕ್ ಕ್ರಿಸ್ತಾಕ್ ಧನಿ ಮನುನ್ ಬಲ್ವಿ ಸರ್ಕೆ ಕಶ್ಯಾಕ್ ಕರ್‍ಲ್ಯಾನ್?” ದಾವಿದ್ ಮನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:43
10 ತಿಳಿವುಗಳ ಹೋಲಿಕೆ  

ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.


ಕೂಡಲೇ ನಾನು ಪವಿತ್ರಾತ್ಮನ ವಶನಾದೆನು. ಪರಲೋಕದಲ್ಲಿ ನನ್ನೆದುರಿಗೆ ಒಂದು ಸಿಂಹಾಸನವಿತ್ತು. ಯಾರೋ ಒಬ್ಬನು ಆ ಸಿಂಹಾಸನದ ಮೇಲೆ ಕುಳಿತಿದ್ದನು.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


“ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”


‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ!


ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, “ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, “ಯೇಸುವೇ ಪ್ರಭು” ಎಂದು ಹೇಳಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು