ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.