ಮತ್ತಾಯ 23:13 - ಪರಿಶುದ್ದ ಬೈಬಲ್13 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ಲೊಕಾ ಸರ್‍ಗಾಚ್ಯಾ ರಾಜಾತ್ ಜಾತಾನಾ ತುಮಿ ತೆಂಕಾ ದಾರ್ ಬಂದ್ ಕರುನ್ ಥವ್ತ್ಯಾಶಿ, ತುಮಿಬಿ ತ್ಯಾತುರ್ ಭುತ್ತುರ್ ಗುಸಿನ್ಯಾಸಿ ಅನಿ ಗುಸುಕ್ ಮನುನ್ ಖಟ್ಪಟ್ತಲ್ಯಾಕ್ನಿಬಿ ತ್ಯಾತುರ್ ಭುತ್ತುರ್ ಗುಸುಕ್ ದಿನ್ಯಾಶಿ. ಅಧ್ಯಾಯವನ್ನು ನೋಡಿ |
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.