ಮತ್ತಾಯ 23:16 - ಪರಿಶುದ್ದ ಬೈಬಲ್16 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಯ್ಯೋ, ದಾರಿತೋರಿಸುವ ಕುರುಡರೇ, ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ನೀವು ಹೇಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 “ಲೊಕಾಕ್ನಿ ವಾಟ್ ದಾಕ್ವುತಲ್ಯಾ ಕುಡ್ಡ್ಯಾನು ತುಮ್ಚಿ ಗತ್ ಕಾಯ್ ಸಾಂಗು! ಕೊನ್ ತರ್ ದೆವಾಚ್ಯಾ ಗುಡಿ ವರ್‍ತಿ ಆನ್ ಘಾಲುನ್ ಮಾಗುನ್ ಘೆಟ್ಲ್ಯಾರ್ ತೆನಿ ತಿ ಮಾಗ್ನಿ ಪುರಾ ಕರುಚಿ ಮನುನ್ ನಾ, ಖರೆ ದೆವಾಚ್ಯಾ ಗುಡಿತ್ಲ್ಯಾ ಸೊನ್ಯಾಚ್ಯಾ ವರ್‍ತಿ ಆನ್ ಘಾಲುನ್ ಮಾಗುನ್ ಘೆಟಲ್ಲೆ ರ್‍ಹಾಲ್ಯಾರ್ ತೆನಿ ತಿ ಮಾಗ್ನಿ ಪುರಾ ಕರುಚಿಚ್ ಮನುನ್ ತುಮಿ ಶಿಕ್ವುತ್ಯಾಶಿ. ಅಧ್ಯಾಯವನ್ನು ನೋಡಿ |