ಮತ್ತಾಯ 23:25 - ಪರಿಶುದ್ದ ಬೈಬಲ್25 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರಭಾಗಗಳನ್ನೇನೋ ಶುಚಿಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳ್ಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಂಚಪಾತ್ರೆ ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ಅವು ಒಳಗೆ ಸುಲುಕೊಂಡವುಗಳಿಂದಲೂ ಇಹಭೋಗ ಪದಾರ್ಥಗಳಿಂದಲೂ ತುಂಬಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮ್ಚಿ ವಾಟ್ಕಿಯಾ ಅನಿ ಆಯ್ದಾನಾ ಭಾಯ್ನಾ ತುಮಿ ಧುವ್ನ್ ಪವಿತ್ರ್ ಕರ್ತ್ಯಾಶಿ, ಖರೆ ಭುತ್ತುರ್ನಾ ತ್ಯಾತುರ್‍ನಿ ತುಮಿ ಮೊಸಾನ್ ಅನಿ ಗರುಕಿನ್ ಕಮ್ವಲ್ಲಿ ಸಾಮಾನಾ ಭರಲ್ಲಿ ಹಾತ್. ಅಧ್ಯಾಯವನ್ನು ನೋಡಿ |