ಮತ್ತಾಯ 23:3 - ಪರಿಶುದ್ದ ಬೈಬಲ್3 ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದದರಿಂದ ಅವರು ನಿಮಗೆ ಏನೇನು ಹೇಳುತ್ತಾರೋ ಅದನ್ನೆಲ್ಲಾ ಮಾಡಿರಿ, ಕಾಪಾಡಿಕೊಳ್ಳಿರಿ; ಆದರೆ ಅವರ ನಡತೆಯ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೇ ಹೊರತು ನಡೆಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಅವರು ನಿಮಗೆ ಹೇಳುವುದನ್ನೆಲ್ಲಾ ಅನುಸರಿಸಿ ನಡೆಯಿರಿ. ಆದರೆ ಅವರ ನಡತೆಗಳ ಪ್ರಕಾರ ನೀವು ನಡೆಯಬೇಡಿರಿ. ಏಕೆಂದರೆ ಅವರು ಹೇಳಿದಂತೆ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತಸೆಮನುನ್ ತೆನಿ ಕಾಯ್ ಕರುಚೆ ಮನುನ್ ಸಾಂಗ್ತ್ಯಾತ್ ತೆ ಸಗ್ಳೆ ತುಮಿ ಕರಾ ಅನಿ ಪಾಳಾ; ಖರೆ ತೆಂಚ್ಯಾ ಚಲ್ನುಕಿ ಸರ್ಕೆ ತುಮಿ ಚಲುನಕಾಶಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಶಿಕ್ವುತಾತ್ ಖರೆ ತೆಚ್ಯಾ ಸರ್ಕೆ ಚಲಿನ್ಯಾತ್. ಅಧ್ಯಾಯವನ್ನು ನೋಡಿ |