Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:30 - ಪರಿಶುದ್ದ ಬೈಬಲ್‌

30 ‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಈ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀತಿವಂತರ ಗೋರಿಗಳನ್ನು ಅಲಂಕರಿಸಿ - ನಾವು ನಮ್ಮ ಹಿರಿಯರ ಕಾಲದಲ್ಲಿ ಇರುತ್ತಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ ಅನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ, ‘ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಪಿತೃಗಳೊಂದಿಗೆ ಪಾಲುಗಾರರಾಗುತ್ತಿರಲಿಲ್ಲ’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅನಿ ಅಮಿ ಅಮ್ಚ್ಯಾ ಅದ್ಲ್ಯಾ ಲೊಕಾಂಚ್ಯಾ ಎಳಾರ್ ರ್‍ಹಾಲ್ಯಾರ್ ತೆನಿ ಕರಲ್ಲ್ಯಾ ಸರ್ಕೆ ಕರಿನಸಿತ್ತಾಂವ್ ಪ್ರವಾದ್ಯಾಕ್ನಿ ಜಿವಾನಿ ಮಾರಿನಸಿ ಹೊತ್ತಾವ್ ಮನುನ್ ಮನ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:30
8 ತಿಳಿವುಗಳ ಹೋಲಿಕೆ  

“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಅವರ ಪೂರ್ವಿಕರ ದೇವರಾದ ಯೆಹೋವನು ಆಗಾಗ್ಗೆ ತನ್ನ ಪ್ರವಾದಿಗಳನ್ನು ಕಳುಹಿಸಿ ತನ್ನ ಜನರನ್ನು ಎಚ್ಚರಿಸಿದನು. ಯಾಕೆಂದರೆ ಆತನಿಗೆ ತನ್ನ ಜನರೂ ತನ್ನ ಮಂದಿರವೂ ನಾಶವಾಗುವದರಲ್ಲಿ ಇಷ್ಟವಿರಲಿಲ್ಲ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟುತ್ತೀರಿ. ಒಳ್ಳೆಯವರಾಗಿ ಜೀವಿಸದವರ ಗೋರಿಗಳಿಗೆ ಹೋಗಿ ಗೌರವ ತೋರಿಸುತ್ತೀರಿ.


ಆ ಪ್ರವಾದಿಗಳನ್ನು ಕೊಂದವರ ಮಕ್ಕಳು (ಸಂತತಿಯವರು) ನೀವೇ ಎಂಬುದಕ್ಕೆ ಇದೇ ಆಧಾರವಾಗಿದೆ.


ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?


ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು