Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:34 - ಪರಿಶುದ್ದ ಬೈಬಲ್‌

34 ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಕ್ನಿ, ಬುದ್ವಂತಾಕ್ನಿ, ಅನಿ ಶಾಸ್ತರಾ ಶಿಕ್ವುತಲ್ಯಾಕ್ನಿ ಮಿಯಾ ಧಾಡುನ್ ದಿತಾ; ತುಮಿ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಜಿವಾನಿಚ್ ಮಾರ್‍ತ್ಯಾಶಿ, ಹುರಲ್ಲ್ಯಾಕ್ನಿ ಕುರ್ಸಾ ವರ್‍ತಿ ಮಾರ್‍ತ್ಯಾಶಿ, ಅನಿ ಉಲ್ಲ್ಯಾಕ್ನಿ ಸಿನಾಗೊಗಾತ್ನಿ ನ್ಹೆವ್ನ್ ಬಾರ್‍ಕೊಲಾನಿ ಮಾರ್‍ತ್ಯಾಶಿ, ಅನಿ ಎಕಾ ಗಾವಾನಿತ್ನಾ ಅನಿಎಕ್ ಗಾವಾಕ್ನಿ ತೆಂಕಾ ಪಳ್ಸುನ್ ಘಾಲ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:34
36 ತಿಳಿವುಗಳ ಹೋಲಿಕೆ  

ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.


ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.


ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಯಾಕೋಬನು ಯೋಹಾನನ ಅಣ್ಣ.


ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.


ಅವರು ಅಪೊಸ್ತಲರನ್ನು ಒಳಗೆ ಕರೆಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು.


ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ಆದರೆ ಅವರು ಜೆಕರ್ಯನ ವಿರೋಧವಾಗಿ ಒಳಸಂಚು ಮಾಡಿದರು. ಅವನನ್ನು ಕೊಲ್ಲಲು ಅರಸನು ಅವರಿಗೆ ಆಜ್ಞಾಪಿಸಿದನು. ಆಗ ಅವರು ಅವನನ್ನು ದೇವಾಲಯದ ಅಂಗಳದಲ್ಲಿಯೇ ಕಲ್ಲೆಸೆದು ಕೊಂದರು.


ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ಆ ಪ್ರವಾದಿಗಳನ್ನು ಕೊಂದವರ ಮಕ್ಕಳು (ಸಂತತಿಯವರು) ನೀವೇ ಎಂಬುದಕ್ಕೆ ಇದೇ ಆಧಾರವಾಗಿದೆ.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಂದ ಈ ಸಂಗತಿಗಳನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು