Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:35 - ಪರಿಶುದ್ದ ಬೈಬಲ್‌

35 “ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತೆಚೆಸಾಟ್ನಿ, ಕಾಯ್ಬಿ ಚುಕ್ ಕರಿನಸಲ್ಲ್ಯಾ ಅಬೆಲಾಕ್ ಜಿವಾನಿ ಮಾರಲ್ಲ್ಯಾಕ್ನಾ ಧರುನ್ ದೆವಾಚಿ ಗುಡಿ ಅನಿ ಅಲ್ತಾರಿಚ್ಯಾ ಮದ್ದಿ ಜಿವಾನಿ ಮಾರಲ್ಲ್ಯಾ ಬೆರಾಕಿಯಾಚ್ಯಾ ಲೆಕಾ ಜೆಕರಿಯಾ ಪತರ್ ಚುಕ್ ಕರಿನಸ್ತಾನಾ ಖಾಲಿ ಫುಕೊಟ್ ಜಿವಾನಿ ಮಾರಲ್ಲ್ಯಾಂಚಿ ಶಿಕ್ಷಾ ತುಮ್ಚೆ ವರ್‍ತಿ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:35
22 ತಿಳಿವುಗಳ ಹೋಲಿಕೆ  

ಪರ್ಶಿಯಾದಲ್ಲಿ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಬೆರೆಕ್ಯನ ಮಗನಾದ ಜೆಕರ್ಯನಿಗೆ ಯೆಹೋವನಿಂದ ಸಂದೇಶವು ದೊರಕಿತು. ಬೆರೆಕ್ಯನು ಪ್ರವಾದಿಯಾದ ಇದ್ದೋವಿನ ಮಗನು. ಇದು ಆತನ ಸಂದೇಶ:


ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.


ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.”


ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”


ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.


ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಬಡವರ ಸ್ಮಶಾನದಲ್ಲಿ ಎಸೆಯಲಾಯಿತು.


ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.


ಅವನ ಮಕ್ಕಳನ್ನು ಕೊಲ್ಲಲು ಸಿದ್ಧಗೊಳ್ಳಿರಿ. ಅವರ ತಂದೆಯ ದುಷ್ಟತನಕ್ಕಾಗಿ ಅವರನ್ನು ಕೊಲ್ಲಿರಿ. ಅವನ ಮಕ್ಕಳು ದೇಶವನ್ನು ಇನ್ನೆಂದಿಗೂ ತಮ್ಮ ವಶಕ್ಕೆ ತೆಗೆದುಕೊಳ್ಳಲಾರರು. ಅವರು ಪ್ರಪಂಚವನ್ನು ಇನ್ನೆಂದಿಗೂ ತಮ್ಮ ಪಟ್ಟಣಗಳಿಂದ ತುಂಬಿಸಲಾರರು.


ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!


“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು