Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:37 - ಪರಿಶುದ್ದ ಬೈಬಲ್‌

37 “ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಜೆರುಜಲೆಮಾ, ಜೆರುಜಲೆಮಾ! ದೆವಾನ್ ಧಾಡಲ್ಲ್ಯಾ ಪ್ರವಾದ್ಯಾಕ್ನಿ ತಿಯಾ ಜಿವಾನಿ ಮಾರ್‍ತೆಯ್ ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಗುಂಡ್ಯಾನಿ ಮಾರ್‍ತೆಯ್! ಕವ್ಡೆಂದಾ ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ಧಾಪುನ್ ಧರ್‍ಲ್ಯಾ ಸರ್ಕೆ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಭೊತ್ಯಾನಿ ಮಾಜಿ ಹಾತಾ ಘಾಲುನ್ ಧರುಕ್ ಮನುನ್ ಮಿಯಾ ಬಗಟ್ಲೊ, ಖರೆ ತಸೆ ಕರುಕ್ ತಿಯಾ ಮಾಕಾ ಸೊಡುಕ್‍ನೆಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:37
46 ತಿಳಿವುಗಳ ಹೋಲಿಕೆ  

ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.


ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.


ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.


ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು.


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ನಿಜವಾಗಿಯೂ ನೀನೇ ನನಗೆ ಸಹಾಯಕ. ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಈ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ.


ಆ ರಾಜನು ಕೆಲವು ಜನರನ್ನು ಔತಣಕ್ಕೆ ಆಹ್ವಾನಿಸಿದನು. ಅಡಿಗೆ ಸಿದ್ಧವಾದ ಬಳಿಕ ರಾಜನು ತನ್ನ ಸೇವಕರ ಮೂಲಕ ಆ ಜನರಿಗೆ ತಿಳಿಸಿದನು. ಆದರೆ ಅವರು ಔತಣಕ್ಕೆ ಬರಲಿಲ್ಲ.


ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.


ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು. ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.


ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ.


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


ಇನ್ನು ಕೆಲವರು ಆ ಸೇವಕರನ್ನು ಹಿಡಿದು, ಹೊಡೆದು ಕೊಂದುಹಾಕಿದರು.


ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.


“ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.”


ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಬಡವರ ಸ್ಮಶಾನದಲ್ಲಿ ಎಸೆಯಲಾಯಿತು.


ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


“ಆಗ ಹಿರಿಯ ಮಗನು ಕೋಪಗೊಂಡು ಔತಣಕೂಟಕ್ಕೆ ಹೋಗಲಿಲ್ಲ. ಆಗ ಅವನ ತಂದೆ ಹೊರಗೆ ಬಂದು ಅವನನ್ನು ಒಳಗೆ ಕರೆದನು.


ನನ್ನ ದ್ರಾಕ್ಷಿತೋಟಕ್ಕೆ ನಾನು ಇನ್ನೇನು ಮಾಡಬೇಕಿತ್ತು. ನಾನು ಮಾಡಬೇಕಿದ್ದನ್ನೆಲ್ಲಾ ಮಾಡಿದೆನು. ಒಳ್ಳೆಯ ದ್ರಾಕ್ಷಿಹಣ್ಣು ಬಿಡುವುದೆಂದು ಆಶಿಸಿದ್ದೆನು. ಆದರೆ ಅದು ಹೊಲಸು ದ್ರಾಕ್ಷಿಗಳನ್ನೇ ಬಿಟ್ಟಿತು. ಹೀಗೆ ಆದದ್ದೇಕೆ?


“ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದ್ದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು.


ಆ ಪ್ರವಾದಿಗಳನ್ನು ಕೊಂದವರ ಮಕ್ಕಳು (ಸಂತತಿಯವರು) ನೀವೇ ಎಂಬುದಕ್ಕೆ ಇದೇ ಆಧಾರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು