Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:10 - ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಲೈ ಜಾನಾ ವಿಶ್ವಾಸ್ ಸೊಡುನ್ ಸೊಡ್ತ್ಯಾತ್; ತೆನಿ ಎಕಾಮೆಕಾಕ್ ಘಾತ್ ಕರ್‍ತಾತ್ ಅನಿ ಎಕಾಮೆಕಾಂಚ್ಯಾ ವರ್‍ತಿ ದುಸ್ಮನ್ಕಿನ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:10
17 ತಿಳಿವುಗಳ ಹೋಲಿಕೆ  

ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು.


“ಸಹೋದರರು ಸಹೋದರರನ್ನೇ, ತಂದೆಗಳು ತಮ್ಮ ಸ್ವಂತ ಮಕ್ಕಳನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ತಮ್ಮ ಸ್ವಂತ ತಂದೆತಾಯಂದಿರ ವಿರುದ್ಧ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ನನ್ನನ್ನು ಸ್ವೀಕರಿಸಿಕೊಳ್ಳುವವನು ಧನ್ಯನಾಗಿದ್ದಾನೆ” ಎಂದು ಉತ್ತರಕೊಟ್ಟನು.


ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.


ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.


ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.


“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.


ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.


ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ.


ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ. ಯೇಸು ಅವರಿಗೆ, “ಪ್ರವಾದಿಗೆ ಪರಜನರು ಮರ್ಯಾದೆ ಸಲ್ಲಿಸುತ್ತಾರೆ; ಆದರೆ ಸ್ವಂತ ಊರಿನವರಾಗಲಿ ಸ್ವಂತ ಮನೆಯವರಾಗಲಿ ಮರ್ಯಾದೆ ಕೊಡುವುದಿಲ್ಲ” ಎಂದು ಹೇಳಿದನು.


ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು