ಮತ್ತಾಯ 24:11 - ಪರಿಶುದ್ದ ಬೈಬಲ್11 ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬಹುಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಲೈ ಝುಟೆ ಪ್ರವಾದಿ ಉಟ್ತಾತ್ ಅನಿ ಲೊಕಾಕ್ನಿ ಪಿಶೆ ಕರ್‍ತಾತ್. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.