Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:14 - ಪರಿಶುದ್ದ ಬೈಬಲ್‌

14 ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಹಿ ದೆವಾಚ್ಯಾ ರಾಜಾಚಿ ಬರಿ ಖಬರ್ ಜಗಾತ್ ಸಗ್ಳ್ಯಾ ಬಾಶಾಂಚ್ಯಾ ಲೊಕಾಕ್ನಿ ಎಕ್ ಸಾಕ್ಷಿ ಸರ್ಕೆ ಸಾಂಗುನ್ ಹೊತಾ, ತನ್ನಾ ಅಂತ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:14
29 ತಿಳಿವುಗಳ ಹೋಲಿಕೆ  

ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.


ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.”


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ಪರಲೋಕರಾಜ್ಯವು ಬೇಗನೆ ಬರುತ್ತದೆ ಎಂದು ಬೋಧಿಸಿ.


ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.


ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!


“ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


“ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು.


ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.


ಆಗ ಸೈತಾನನು ಯೇಸುವನ್ನು ಕರೆದುಕೊಂಡು ಹೋಗಿ, ಒಂದೇ ಕ್ಷಣದಲ್ಲಿ ಭೂಲೋಕದ ಎಲ್ಲಾ ರಾಜ್ಯಗಳನ್ನು ತೋರಿಸಿ,


ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ ಮಾತಾಡಿದನು; ಅವರು ಮಾಡಬೇಕಾದದ್ದನ್ನು ಪವಿತ್ರಾತ್ಮನ ಸಹಾಯದಿಂದ ಅವರಿಗೆ ತಿಳಿಸಿದನು.


ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)


ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ.


ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.


ಈ ಸಂಗತಿಗಳು ಸಂಭವಿಸುವುದಕ್ಕಿಂತ ಮೊದಲು ನೀವು ಜನರಿಗೆಲ್ಲ ಸುವಾರ್ತೆಯನ್ನು ತಿಳಿಸಬೇಕು.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು.


ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”


ಮುಂದೆ ಬರುವ ನೂತನ ಲೋಕವನ್ನು ಆಳಲು ದೇವರು ದೇವದೂತರನ್ನು ಆರಿಸಲಿಲ್ಲ. ಈಗ ನಾವು ನಿಮಗೆ ಹೇಳುತ್ತಿರುವುದು ಆ ಲೋಕದ ಕುರಿತಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು