ಮತ್ತಾಯ 24:15 - ಪರಿಶುದ್ದ ಬೈಬಲ್15 “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 “ದಾನಿಯೆಲ್ ಪ್ರವಾದ್ಯಾನ್ ಸಾಂಗಲ್ಲಿ ಸತ್ತ್ಯಾನಾಸ್ ಕರ್‍ತಲಿ ಬುರ್ಶಿ ಸಂಗತ್” ತುಮ್ಕಾ ದಿಸ್ತಾ. ತಿ ಎಕ್ ಪವಿತ್ರ್ ಜಾಗ್ಯಾರ್ ಇಬೆ ರ್‍ಹಾತಾ. ವಾಚ್ವುತಲ್ಯಾಕ್ ಸೂಚನಾ: ಅಶೆ ಮಟ್ಲ್ಯಾರ್ ಕಾಯ್ ಮನುನ್ ಕಳ್ವುನ್ ಘೆ! ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.