ಮತ್ತಾಯ 24:3 - ಪರಿಶುದ್ದ ಬೈಬಲ್3 ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಾನಾ ಜೆಜು ಒಲಿವ್ ಮನ್ತಲ್ಯಾ ಮಡ್ಡಿ ವರ್‍ತಿ ಬಸಲ್ಲೊ, ತನ್ನಾ ಶಿಸಾ ಎವ್ಡಿಚ್ ಕಡೆಕ್ ಜೆಜುಕ್ಡೆ ಯೆಲಿ ಅನಿ ತೆನಿ ಜೆಜುಕ್ “ಹೆ ಸಗ್ಳೆ ಕನ್ನಾ ಹೊತಾ, ಅನಿ ಹ್ಯೊಚ್ ಸರ್‍ತೊ ಕಾಲ್ ಅನಿ ತಿಯಾ ಯೆತಲೊ ಕಾಲ್ ಮನುನ್ ದಾಕ್ವುನ್ ದಿವ್ಕ್ ತನ್ನಾ ಕಾಯ್-ಕಾಯ್ ಹೊತಾ.” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |