ಮತ್ತಾಯ 24:49 - ಪರಿಶುದ್ದ ಬೈಬಲ್49 ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದುಕುಡಿಯಲಾರಂಭಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ತನ್ನ ಜೊತೆ ಆಳುಗಳನ್ನು ಹೊಡೆಯುವದಕ್ಕೆ ತೊಡಗಿ ಕುಡಿಕರ ಸಂಗಡ ತಿನ್ನುತ್ತಾ ಕುಡಿಯುತ್ತಾ ಇರುವದಾದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಅನಿ ತೊ ಅಪ್ನಾಚ್ಯಾ ವಾಂಗುಡ್ಚ್ಯಾ ಅಳಾಕ್ನಿ ಮಾರುಕ್ ಲಾಗ್ತಾ, ಅನಿ ಫಿದೊಡ್ಯಾಂಚ್ಯಾ ವಾಂಗ್ಡಾ ಖಾತಲೆ-ಫಿತಲೆ ಕರ್‍ತಾ. ಅಧ್ಯಾಯವನ್ನು ನೋಡಿ |
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”