ಮತ್ತಾಯ 24:7 - ಪರಿಶುದ್ದ ಬೈಬಲ್7 ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜನಾಂಗಕ್ಕೆ ವಿರುದ್ಧ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರವೂ ಯುದ್ಧಕ್ಕಿಳಿಯುವುವು. ಅಲ್ಲಲ್ಲಿ ಕ್ಷಾಮಡಾಮರಗಳೂ ಭೂಕಂಪಗಳೂ ಸಂಭವಿಸುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ದೆಸಾ ಎಕಾಮೆಕಾಕ್ಡೆ ಝಗ್ಡೆ ಕರುನ್ ಘೆತ್ಯಾತ್, ಅನಿ ರಾಜಾಬಿ ಎಕಾಮೆಕಾ ವರ್‍ತಿ ಝಗ್ಡುನ್ಗೆತ್ ರ್‍ಹಾತ್ಯಾತ್, ಬರಗಾಲಾ ಪಡ್ತ್ಯಾತ್, ಅನಿ ಸಗ್ಳ್ಯಾಕ್ಡೆ ಭುಕಂಪಾ ಹೊತ್ಯಾತ್. ಅಧ್ಯಾಯವನ್ನು ನೋಡಿ |
ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.
ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟಪಡುವವು. ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೋವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾದಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವುದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು.
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.