Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:17 - ಪರಿಶುದ್ದ ಬೈಬಲ್‌

17 ಎರಡು ತಲಾಂತು ಹೊಂದಿದ ಸೇವಕನೂ ಅದೇ ರೀತಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಎರಡು ತಲಾಂತು ಸಂಪಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆಚ್ ದೊನ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ಘೆಟಲ್ಲ್ಯಾನ್, ಅನಿ ದೊನ್ ಹಜಾರ್ ಪೈಸ್ಯಾಂಚ್ಯಾ ಗಾಲಿಯಾ ಕಮ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:17
23 ತಿಳಿವುಗಳ ಹೋಲಿಕೆ  

ಈ ದಿನಗಳು ಕೆಟ್ಟವುಗಳಾಗಿವೆ. ಆದ್ದರಿಂದ ನಿಮಗಿರುವ ಪ್ರತಿಯೊಂದು ಅವಕಾಶವನ್ನು ಒಳ್ಳೆಯದಕ್ಕಾಗಿ ಉಪಯೋಗಿಸಿರಿ.


ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಬರ್ಜಿಲ್ಲೈಯನು ಮುದುಕನಾಗಿದ್ದನು. ಅವನಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ದಾವೀದನು ಮಹನಯಿಮಿನಲ್ಲಿ ವಾಸಿಸುತ್ತಿದ್ದಾಗ ಅವನು ದಾವೀದನಿಗೆ ಆಹಾರವನ್ನೂ ಮತ್ತಿತರ ವಸ್ತುಗಳನ್ನೂ ಕೊಟ್ಟಿದ್ದನು; ಯಾಕೆಂದರೆ ಅವನು ಶ್ರೀಮಂತನಾಗಿದ್ದನು.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ಆದರೆ ಒಂದು ತಲಾಂತು ಹೊಂದಿದವನು ಹೊರಟುಹೋಗಿ ನೆಲದಲ್ಲಿ ಒಂದು ಗುಂಡಿ ತೋಡಿ ಆ ಹಣವನ್ನು ಅಡಗಿಸಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು