ಮತ್ತಾಯ 25:29 - ಪರಿಶುದ್ದ ಬೈಬಲ್29 ತನ್ನಲ್ಲಿರುವುದನ್ನು ವಿನಿಯೋಗಿಸುವ ಪ್ರತಿಯೊಬ್ಬನಿಗೂ ಹೆಚ್ಚಾಗಿ ಕೊಡಲ್ಪಡುವುದು, ಆದರೆ ತನ್ನಲ್ಲಿರುವುದನ್ನು ವಿನಿಯೋಗಿಸದಿರುವ ವ್ಯಕ್ತಿಯಿಂದ ಇದ್ದದ್ದನ್ನೂ ಕಸಿದುಕೊಳ್ಳಲಾಗುವುದು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇದ್ದವರಿಗೆಲ್ಲಾ ಕೊಡಲ್ಪಡುವದು, ಅವರಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಕೊನಾಕ್ಡೆ ಉಲ್ಲೆಸೆ ಹಾಯ್ ತೆಂಕಾ ಅನಿ ಜಾಸ್ತಿಚೆ ದಿವ್ನ್ ಹೊತಾ ಅನಿ ತೆಚೆಕ್ಡೆ ಭರ್‍ಪುರ್ ರ್‍ಹಾತಾ. ಖರೆ ಜೆ ಕೊನಾಕ್ಡೆ ಕಾಯ್ಬಿ ನಾ. ತೆಂಚ್ಯಾಕ್ಡೆ ಹೊತ್ತೆ ಉಲ್ಲೆಸೆಬಿ ಕಾಡುನ್ ಘೆವ್ನ್ ಹೊತಾ. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.
ಆದ್ದರಿಂದ ನಾನು ಹಿಂತಿರುಗಿ ಬರುವೆನು. ನಾನು ಕೊಟ್ಟಿರುವ ಧಾನ್ಯವು ಕೊಯ್ಲಿಗೆ ತಯಾರಾದ ಅವಳಿಂದ ಅದನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ದ್ರಾಕ್ಷಿಹಣ್ಣು ಪಕ್ವವಾಗಿದ್ದಾಗ ನಾನು ಬಂದು ನನ್ನ ದ್ರಾಕ್ಷಾರಸವನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಕೊಟ್ಟಿರುವ ಉಣ್ಣೆ ಮತ್ತು ನಾರಿನ ಬಟ್ಟೆಯನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಅದನ್ನು ಅವಳಿಗೆ ತನ್ನ ಬೆತ್ತಲೆ ಶರೀರವನ್ನು ಮುಚ್ಚಿಕೊಳ್ಳುವದಕ್ಕೋಸ್ಕರ ಕೊಟ್ಟಿದ್ದೆನು.