Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:3 - ಪರಿಶುದ್ದ ಬೈಬಲ್‌

3 ಬುದ್ಧಿಹೀನ ಕನ್ನಿಕೆಯರು ತಮ್ಮ ದೀಪಾರತಿಗಳನ್ನು ತಂದರೇ ಹೊರತು ಬೇಕಾಗುವಷ್ಟು ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬುದ್ಧಿಯಿಲ್ಲದವರು ತಮ್ಮ ಆರತಿಗಳನ್ನು ತಕ್ಕೊಂಡರು, ಆದರೆ ಎಣ್ಣೆ ತಕ್ಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬುದ್ಧಿಹೀನರು, ತಮ್ಮ ದೀಪಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಬುದ್ದ್ ನಸಲ್ಲ್ಯಾನಿ ತೆಂಚ್ಯಾ ಅರ್‍ತಿಯಾ ಘೆಟ್ಲ್ಯಾನಿ ಖರೆ ವಾಂಗ್ಡಾ ಜಾಸ್ತಿಚೆ ತೆಲ್ ಘೆವ್ಕ್‌ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:3
12 ತಿಳಿವುಗಳ ಹೋಲಿಕೆ  

ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.


ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.


ಈತನು ಶತ್ರು ಸೈನ್ಯವನ್ನು ನೋಡಿದಾಕ್ಷಣ ತನ್ನ ತುತ್ತೂರಿಯನ್ನೂದಿ ಜನರನ್ನು ಎಚ್ಚರಿಸುವನು.


“ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.


ಅವರಲ್ಲಿ ಐದು ಮಂದಿ ಬುದ್ಧಿಹೀನರಾಗಿದ್ದರು. ಇನ್ನುಳಿದ ಐದು ಮಂದಿ ಬುದ್ಧಿವಂತೆಯರಾಗಿದ್ದರು.


ಬುದ್ಧಿವಂತೆಯರು ತಮ್ಮ ದೀಪಗಳೊಂದಿಗೆ ಬೇಕಾದಷ್ಟು ಎಣ್ಣೆಯನ್ನೂ ತೆಗೆದುಕೊಂಡರು.


ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು