Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:33 - ಪರಿಶುದ್ದ ಬೈಬಲ್‌

33 ಮನುಷ್ಯಕುಮಾರನು ಕುರಿಗಳನ್ನು ತನ್ನ ಬಲಗಡೆಯಲ್ಲಿಯೂ ಮತ್ತು ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಕುರಿಗಳನ್ನು ತನ್ನ ಬಲಗಡೆಯಲ್ಲಿ ಆಡುಗಳನ್ನು ತನ್ನ ಎಡಗಡೆಯಲ್ಲಿ ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಾನು ಕುರಿಗಳನ್ನು ನನ್ನ ಬಲಗಡೆಯಲ್ಲಿಯೂ ಆಡುಗಳನ್ನು ಎಡಗಡೆಯಲ್ಲಿಯೂ ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಮಾನಾ ಬರ್‍ಯಾ ವಾಟೆನ್ ಚಲಲ್ಲ್ಯಾ ಲೊಕಾಕ್ನಿ ಅಪ್ನಾಚ್ಯಾ ಉಜ್ವ್ಯಾ ಬಾಜುಕ್ ಅನಿ ಬರ್‍ಯಾ ವಾಟೆನ್ ಚಲಿನಸಲ್ಲ್ಯಾ ಲೊಕಾಕ್ನಿ ರೊಡ್ಡ್ಯಾ ಬಾಜುಕ್ ಇಬೆ ರ್‍ಹಾವ್‍ಸುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:33
15 ತಿಳಿವುಗಳ ಹೋಲಿಕೆ  

ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ದೇವರು ಕ್ರಿಸ್ತನನ್ನು ಪರಲೋಕದೊಳಗೆ ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.


ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.


ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.


ಬತ್ಷೆಬೆಳು ರಾಜನಾದ ಸೊಲೊಮೋನನೊಂದಿಗೆ ಮಾತನಾಡಲು ಹೋದಳು. ಸೊಲೊಮೋನನು ಆಕೆಯನ್ನು ಕಂಡು ಎದ್ದುನಿಂತು ಅವಳಿಗೆ ಬಾಗಿ ನಮಸ್ಕರಿಸಿ, ಸಿಂಹಾಸನದ ಮೇಲೆ ಕುಳಿತನು. ಅವನು ತನ್ನ ತಾಯಿಗಾಗಿ ಮತ್ತೊಂದು ಸಿಂಹಾಸನವನ್ನು ತರಲು ಕೆಲವು ಸೇವಕರಿಗೆ ಹೇಳಿದನು. ನಂತರ ಅವಳು ಅವನ ಬಲಗಡೆಯಲ್ಲಿ ಕುಳಿತಳು.


ಜ್ಞಾನಿಯ ಆಲೋಚನೆಗಳು ಅವನನ್ನು ಸರಿಯಾದ ದಾರಿಯಲ್ಲಿ ನಡೆಸುತ್ತವೆ. ಆದರೆ ಮೂಢನ ಆಲೋಚನೆಗಳು ಅವನನ್ನು ತಪ್ಪಾದ ದಾರಿಯಲ್ಲಿ ನಡೆಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು