ಮತ್ತಾಯ 25:36 - ಪರಿಶುದ್ದ ಬೈಬಲ್36 ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವದಕ್ಕೆ ಕೊಟ್ಟಿರಿ; ರೋಗದಲ್ಲಿ ಬಿದ್ದಿದ್ದೆನು, ನನ್ನನ್ನು ಆರೈಕೆ ಮಾಡುವದಕ್ಕೆ ಬಂದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವದಕ್ಕೆ ಬಂದಿರಿ ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಮಿಯಾ ನಾಗ್ಡೊ ಹೊತ್ತೊ ತುಮಿ ಮಾಕಾ ನೆಸುಕ್ ದಿಲ್ಯಾಶಿ, ಮಿಯಾ ಶಿಕ್ ಪಡಲ್ಲೊ ತನ್ನಾ ಮಾಜಿ ಕಾಳ್ಜಿ ಕರ್‍ಲ್ಯಾಶಿ, ಮಿಯಾ ಬಂದಿಖಾನ್ಯಾತ್ ಹೊತ್ತೊ, ತನ್ನಾ ತುಮಿ ಮಾಕಾ ಭೆಟುಕ್ ಯೆಲ್ಲ್ಯಾಶಿ. ಮನುನ್ ಸಾಂಗ್ತಾ. ಅಧ್ಯಾಯವನ್ನು ನೋಡಿ |
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”