ಮತ್ತಾಯ 25:43 - ಪರಿಶುದ್ದ ಬೈಬಲ್43 ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಪರದೇಶಿಯಾಗಿದ್ದೆನು, ನೀವು ನನ್ನನ್ನು ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವದಕ್ಕೆ ಕೊಡಲಿಲ್ಲ; ರೋಗದಲ್ಲಿ ಬಿದ್ದಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವದಕ್ಕೆ ಬರಲಿಲ್ಲವೆಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಮಿಯಾ ಪರ್‌ದೆಶಿ ಹೊತ್ತೊ ತನ್ನಾ ತುಮಿ ಮಾಕಾ ತುಮ್ಚ್ಯಾ ಘರಾತ್ನಿ ಅಸ್ರೊ ದಿವ್ಕನ್ಯಾಶಿ, ಮಿಯಾ ನಾಗ್ಡೊ ಹೊತ್ತೊ ತನ್ನಾ ತುಮಿ ಮಾಕಾ ನೆಸುಕ್ ಕಪ್ಡೆ ದಿವ್ಕನ್ಯಾಶಿ. ಶಿಕ್ ಹೊತ್ತೊ ಅನಿ ಬಂದಿಖಾನ್ಯಾತ್ ಹೊತ್ತೊ ತನ್ನಾ ತುಮಿ ಮಾಜಿ ಕಾಳ್ಜಿ ಕರುಕ್‍ನ್ಯಾಶಿ. ಮನುನ್ ಸಾಂಗ್ತಾ. ಅಧ್ಯಾಯವನ್ನು ನೋಡಿ |
ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.