ಮತ್ತಾಯ 25:44 - ಪರಿಶುದ್ದ ಬೈಬಲ್44 “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಅದಕ್ಕೆ ಅವರು ಸಹ - ಸ್ವಾಮೀ, ಯಾವಾಗ ನೀನು ಹಸಿದದ್ದನ್ನೂ ನೀನು ಬಾಯಾರಿದ್ದನ್ನೂ ನೀನು ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ರೋಗದಲ್ಲಿ ಬಿದ್ದದ್ದನ್ನೂ ಸೆರೆಮನೆಯಲ್ಲಿದ್ದದ್ದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು? ಅನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ತನ್ನಾ ತೆನಿ, ಧನಿಯಾ, ಕನ್ನಾ ಅಮಿ ತುಕಾ ಭುಕೆನ್ ಹೊತ್ತೊ ನಾಹೊಲ್ಯಾರ್ ಸೊಸೆನ್ ಹೊತ್ತೊ. ಪರ್‌ದೆಶಿ ಹೊತ್ತೊ ನಾಹೊಲ್ಯಾರ್ ನಾಗ್ಡೊ ಹೊತ್ತೊ. ಶಿಕ್ ಹೊತ್ತೊ ನಾಹೊಲ್ಯಾರ್ ಬಂದಿಖಾನ್ಯಾತ್ ಹೊತ್ತೊ ಬಗಟ್ಲಾವ್. ಅನಿ ತುಕಾ ಮಜತ್ ಕರಿನಸ್ತಾನಾ ರ್‍ಹಾಲಾವ್? ಮನುನ್ ಜಬಾಬ್ ದಿತ್ಯಾತ್. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.