Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:46 - ಪರಿಶುದ್ದ ಬೈಬಲ್‌

46 “ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 “ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತನ್ನಾ ಹ್ಯಾ ಬರ್‍ಯಾ ವಾಟೆನ್ ಚಲಿನಸಲ್ಲ್ಯಾ ಲೊಕಾಕ್ನಿ ಖಾಯಮ್ಚ್ಯಾ ಶಿಕ್ಷೆತ್ ಧಾಡುನ್ ಹೊತಾ ಅನಿ ಬರ್‍ಯಾ ವಾಟೆನ್ ಚಲಲ್ಲಿ ಲೊಕಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ ಜಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:46
34 ತಿಳಿವುಗಳ ಹೋಲಿಕೆ  

ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.


ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು.


ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು.


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.


ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ!


ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರುನೋಡುತ್ತಿರಿ.


ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವ ಹೊಂದಲು ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು