Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:2 - ಪರಿಶುದ್ದ ಬೈಬಲ್‌

2 “ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಇರುವುದೆಂದು ನೀವು ಬಲ್ಲಿರಿ. ಆಗ ಮನುಷ್ಯಪುತ್ರನಾದ ನನ್ನನ್ನು ಶಿಲುಬೆಗೆ ಹಾಕಲು ಹಿಡಿದುಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತುಮ್ಕಾ ಗೊತ್ತ್ ಹೊತ್ತ್ಯಾ ಸರ್ಕೆ ದೊನ್ ದಿಸಾಂಚ್ಯಾ ಮಾನಾ ಪಾಸ್ಕಾಚೊ ಸನ್ ಹಾಯ್ ಅನಿ ಮಾನ್ಸಾಚ್ಯಾ ಲೆಕಾಕ್ ಕುರ್ಸಾರ್ ಮಾರುಕ್ ಮನುನ್ ಧರುನ್ ದಿವ್ನ್ ಹೊತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:2
17 ತಿಳಿವುಗಳ ಹೋಲಿಕೆ  

ಯೇಸುವಿಗೆ ದ್ರೋಹ ಬಗೆದ ಯೂದನಿಗೂ ಈ ಸ್ಥಳವು ತಿಳಿದಿತ್ತು. ಏಕೆಂದರೆ ಯೇಸು ತನ್ನ ಶಿಷ್ಯರೊಂದಿಗೆ ಆಗಾಗ್ಗೆ ಅಲ್ಲಿಗೆ ಬರುತ್ತಿದ್ದನು.


ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.


ಒಮ್ಮೆ ಶಿಷ್ಯರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದರು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು.


ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)


ಆಗ ಯೆಹೂದ್ಯರ ಪಸ್ಕಹಬ್ಬ ಬಹು ಸಮೀಪವಾಗಿತ್ತು. ಆದ್ದರಿಂದ ಯೇಸು ಜೆರುಸಲೇಮಿಗೆ ಹೋದನು.


ಯೇಸು ಅವರಿಗೆ, “ನಾನು ಸಾಯುವ ಮೊದಲು ಈ ಪಸ್ಕದ ಊಟ ಮಾಡಲು ಬಹಳವಾಗಿ ಅಪೇಕ್ಷಿಸಿದ್ದೇನೆ.


“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.


“ನೀವು ಯಜ್ಞಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಬಾರದು; “ಪಸ್ಕ ಭೋಜನದ ಮಾಂಸದಲ್ಲಿ ಏನನ್ನೂ ಮರುದಿನದ ಮುಂಜಾನೆಯವರೆಗೆ ಉಳಿಸಬಾರದು.


ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ.


(ತಾನು ಸಾಯುವ ರೀತಿಯ ಬಗ್ಗೆ ಯೇಸು ಹೇಳಿದ್ದ ಮಾತು ಹೀಗೆ ನಿಜವಾಯಿತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು