Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:21 - ಪರಿಶುದ್ದ ಬೈಬಲ್‌

21 ಅವರೆಲ್ಲರೂ ಊಟ ಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿರುವ ಹನ್ನೆರಡು ಮಂದಿಯಲ್ಲಿ ಒಬ್ಬನು ನನ್ನನ್ನು ವೈರಿಗಳಿಗೆ ಒಪ್ಪಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸು, “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಊಟಮಾಡುತ್ತಿರುವಾಗ ಆತನು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ಊಟಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ಜೆವಾನ್ ಕರ್‍ತಾನಾ ಜೆಜುನ್,“ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ತುಮ್ಚ್ಯಾತ್ಲೊ ಎಕ್ಲೊ ಮಾಕಾ ವಿಶ್ವಾಸ್‍ ಘಾತ್ ಕರ್‍ನಾರ್ ಹಾಯ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:21
11 ತಿಳಿವುಗಳ ಹೋಲಿಕೆ  

ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


“ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.


ಶಿಷ್ಯರು ಇದನ್ನು ಕೇಳಿ ಬಹಳ ದುಃಖಪಟ್ಟರು. ಪ್ರತಿಯೊಬ್ಬ ಶಿಷ್ಯನು ಯೇಸುವಿಗೆ, “ಪ್ರಭುವೇ, ನಿಜವಾಗಿಯೂ ನಾನಲ್ಲ!” ಎಂದು ಹೇಳಿದರು.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು