ಮತ್ತಾಯ 26:28 - ಪರಿಶುದ್ದ ಬೈಬಲ್28 ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹೆ ದೆವಾಚ್ಯಾ ನವ್ಯಾ ಕರಾರಾಚ್ಯಾ ವರ್‍ತಿ ಛಪ್ಪೊ ಮಾರ್‍ತಲೆ ಮಾಜೆ ರಗಾತ್, ಲೈ ಜಾನಾಂಚ್ಯಾ ಪಾಪಾಂಚ್ಯಾ ಮಾಪಿ ಸಾಟ್ನಿ ವೊತಲ್ಲೆ. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.